ಮಂಗಳೂರು: ಡ್ರಗ್ಸ್ ಜಾಡು ಬೇಧಿಸುತ್ತಿರುವ ಅಧಿಕಾರಿಗಳ ಹಾದಿಯಲ್ಲಿ ಇನ್ನೂ ಅದೇಷ್ಟು ಕುಳಗಳು ತಗಲಾಕಿಕೊಳ್ಳುತ್ತವೇವೋ ಗೊತ್ತಿಲ್ಲ ಸಧ್ಯಕ್ಕೆ ಇದೇ ಡ್ರಗ್ಸ್ ಪ್ರಕರಣಕ್ಕೆ ಸಬಂಧಿಸಿದಂತೆ ಬಂಧಿತರಾಗಿರುವ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಹಾಗೂ ಅಕೀಲ್ ನೌಶೀನ್ ನನ್ನು ಅಕ್ಟೋಬರ್ 9 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಂಧಿತರನ್ನು ಶುಕ್ರವಾರ ನಾರ್ಕೊಟಿಕ್ ಕ್ರೈಂ ಪೊಲೀಸರು ಮಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ ಪೊಲೀಸರು, ಅ.9 ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಕಳೆದ ಆರು ದಿನಗಳಿಂದ ಆರೋಪಿಗಳು ನಾರ್ಕೊಟಿಕ್ ಪೊಲೀಸರ ವಶದಲ್ಲಿದ್ದರು.
ಸೆಪ್ಟೆಂಬರ್ 19ರಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಗಳು ಮುಂಬೈಯಿಂದ ವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು.
ಇಬ್ಬರ ಮೇಲೆ ಸೇವನೆ ಮತ್ತು ಮಾರಾಟ ಎರಡೂ ಪ್ರಕರಣ ದಾಖಲಾಗಿದೆ.
PublicNext
26/09/2020 07:46 am