ಬೆಳಗಾವಿ: ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮ ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿತ್ತು. ಈಗ ರಾಜ್ಯದಲ್ಲಿ ಮತ್ತೊಂದು ಭಾರೀ ಪರೀಕ್ಷಾ ಅಕ್ರಮ ಬಯಲಾಗಿದೆ.
ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ತಂದೆ, ಮಗನನ್ನು ಬಂಧಿಸಿದ್ದಾರೆ.
ಗದಗದ ಮುನ್ಸಿಪಲ್ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ ಮತ್ತು ಅವರ ಪುತ್ರ ಸಮಿತ್ ಕುಮಾರ್ ಬಂಧಿತ ಆರೋಪಿಗಳು. ಇವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಸಮೀತಕುಮಾರ್ ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಕೊಟ್ಟು ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದಾನೆ. ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಮೊಬೈಲ್ ಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
ಸೈಬರ್ ಪೊಲೀಸರು, ಕಾಲೇಜ್ ಪ್ರಾಚಾರ್ಯ ಕುಲಕರ್ಣಿ ಅವರನ್ನು ವಿಚಾರಣೆ ನಡೆಸಿದ್ದು ವಿಚಾರಣೆ ವೇಳೆ ಪ್ರಾಚಾರ್ಯರ ಕಣ್ಣೀರಿಟ್ಟಿದ್ದಾರೆ. 2022, ಆಗಸ್ಟ್ 7ರ ಭಾನುವಾರದಂದು ಗದಗ-ಬೆಟಗೇರಿ ಅವಳಿ ನಗರದಲ್ಲಿ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಆ ಪೈಕಿ ಮುನ್ಸಿಪಲ್ ಕಾಲೇಜ್ ನಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ. ಪ್ರಶ್ನೆ ಪತ್ರಿಕೆ ಲಿಂಕ್ ಆಗಿರುವ ಜಾಡು ಹಿಡಿದುಕೊಂಡು ಬಂದ ಬೆಳಗಾವಿ ಪೊಲೀಸರು ಭಾರಿ ಶೋಧ ನಡೆಸುತ್ತಿದ್ದಾರೆ.
PublicNext
22/08/2022 07:02 am