ಅಯೋಧ್ಯೆ : ವಿದ್ಯಾರ್ಥಿಗಳು ಓದಿನ ಕಡೆಗೆ ಕೊಡಬೇಕಾದ ಗಮನವನ್ನು ಬೇರೆಡೆ ನೀಡಿ ಸುಮ್ಮನೆ ತಮ್ಮ ಭವಿಷ್ಯದ ಮೇಲೆ ಬರೆ ಎಳೆದುಕೊಳ್ಳುತ್ತಿದ್ದಾರೆ.
ಹೌದು ದೇಶ ವಿರೋಧಿ ಘೋಷಣೆಗಳನ್ನು ಹಾಕಿದ ಆರೋಪದ ಮೇರೆಗೆ ಇಲ್ಲಿನ ಕಾಲೇಜೊಂದರ ಆರು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.
ಕಾಲೇಜಿನ ಪ್ರಾಂಶುಪಾಲರು ಈ ಬಗ್ಗೆ ದೂರು ನೀಡಿದ್ದರು.
ವಿದ್ಯಾರ್ಥಿ ಸಂಘಟನೆಯ ಚುನಾವಣೆ ನಡೆಸುವಂತೆ ಆಗ್ರಹಿಸಿ ಸಾಕೇತ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ಡಿಸೆಂಬರ್ 16 ರಂದು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು.
'ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು 'ಆಜಾದಿ ಲೇಕೆ ರಹೇಂಗೆ' ( ಸ್ವಾತಂತ್ರ್ಯ ಪಡೆದೆ ತೀರುತ್ತೇವೆ) ಎನ್ನುವ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ' ಎಂದು ಸಾಕೇತ್ ಪದವಿ ಕಾಲೇಜಿನ ಪ್ರಾಂಶುಪಾಲ ಎನ್.ಡಿ ಪಾಂಡೆ ಅವರು ದೂರಿನಲ್ಲಿ ತಿಳಿಸಿದ್ದಾರೆ.
'ವಿದ್ಯಾರ್ಥಿಗಳು ಸ್ವಾತಂತ್ರ್ಯದ ಘೋಷಣೆಗಳನ್ನು ಹಾಕಿದ್ದರು.
ಹಿಂಸಾಚಾರದ ಮೂಲಕ ಸ್ವಾತಂತ್ರ್ಯ ಪಡೆಯುವುದಾಗಿ ಹೇಳಿದ್ದರು. ಮಾತೃ ಭೂಮಿ ರಕ್ಷಿಸುವುದು ನನ್ನ ಧರ್ಮ.
ಹಾಗಾಗಿ ನಾನು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ್ದೇನೆ' ಎಂದು ಎನ್.ಡಿ ಪಾಂಡೆ ತಿಳಿಸಿದ್ದಾರೆ.
ಆದರೆ, ಈ ಆರೋಪವನ್ನು ತಳ್ಳಿ ಹಾಕಿರುವ ವಿದ್ಯಾರ್ಥಿಗಳು, 'ನಾವು ಭ್ರಷ್ಟ ಪ್ರಾಂಶುಪಾಲ ಮತ್ತು ವಿದ್ಯಾರ್ಥಿ ವಿರೋಧಿ ವ್ಯವಸ್ಥೆಯಿಂದ ಸ್ವಾತಂತ್ರ್ಯ ಬಯಸಿದ್ದೇವೆ' ಎಂದು ಹೇಳಿದ್ದಾರೆ.
PublicNext
28/12/2020 03:03 pm