ಮೈಸೂರ : ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಸದ್ಯ ಈ ಕೇಸ್ ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬಾಯ್ ಫ್ರೆಂಡ್ ಜೊತೆಗಿದ್ದ ವಿದ್ಯಾರ್ಥಿಯನ್ನು ರೇಪ್ ಮಾಡಿದ ಕಾಮುಕರು 3 ಲಕ್ಷ ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದ್ದರು. ಹಣ ನೀಡದಿದ್ದರೆ ನಗ್ನ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿ ಹಲ್ಲೆ ಕೂಡಾ ನಡೆಸಿದ್ದಾರೆ.
ನಮ್ಮಿಂದ ಹಣ ನೀಡಲು ಸಾಧ್ಯವಿಲ್ಲ ಎಂದಾಗ ನನ್ನ ತಂದೆಗೆ ಕಾಮಪಿಚಾಚಿಗಳು ಕರೆಮಾಡಿದ್ದಾರೆ ಎಂದು ಸಂತ್ರಸ್ತೆಯ ಸ್ನೇಹಿತ ಹೇಳಿದ್ದಾರೆ.ಈ ವೇಳೆಗೆ ಸ್ಥಳಕ್ಕೆ ಬಂದ ನನ್ನ ತಂದೆಯೇ ನಮ್ಮನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎನ್ನುವ ಮಾಹಿತಿ ಬಯಲಾಗುತ್ತಿದೆ.
ಘಟನೆಯ ಸಂಬಂಧ ಮೈಸೂರು- ಬೆಂಗಳೂರು ಪೊಲೀಸರ ಜಂಟಿ ತಂಡಕ್ಕೆ ಆರೋಪಿಗಳ ಸುಳಿವು ಲಭಿಸಿದ್ದು, ನಗರದ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಕೇರಳದ ಮೂವರು ಮತ್ತು ತಮಿಳುನಾಡಿನ ಒಬ್ಬ ವಿದ್ಯಾರ್ಥಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ.
ಅತ್ಯಾಚಾರ ಘಟನೆಯ ಬಳಿಕ ಇವರು ಮೈಸೂರಿನ ಮನೆ ಖಾಲಿ ಮಾಡಿ ಕೇರಳ ಮತ್ತು ತಮಿಳುನಾಡಿನಲ್ಲಿ ತಲೆಮರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಾಲ್ವರು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬುಧವಾರ ನಡೆದ ಪರೀಕ್ಷೆಗೂ ಗೈರಾಗಿದ್ದರು ಎನ್ನಲಾಗಿದೆ.
ಸಂತ್ರಸ್ತೆಯ ಸ್ನೇಹಿತರೇ?
ಘಟನೆ ನಡೆದು 3 ದಿನಗಳಾದರೂ ಸಂತ್ರಸ್ತೆ ದೂರು, ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ ದುಷ್ಕರ್ಮಿಗಳು ಈಕೆಗೆ ಪರಿಚಯದವರೇ ಎಂಬ ಅನುಮಾನ ವ್ಯಕ್ತವಾಗಿದೆ. ಆಕೆ ಹೇಳಿಕೆ ದಾಖಲಿಸದೆ, ದೂರು ನೀಡದೆ ಇರುವುದರಿಂದ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಸಂತ್ರಸ್ತೆ ದೂರು ನೀಡಲು ನಿರಾಕರಿಸಿದ್ದು, ಚೇತರಿಸಿಕೊಂಡ ಬಳಿಕ ಊರಿಗೆ ತೆರಳುವ ಯೋಚನೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
PublicNext
28/08/2021 08:30 am