ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಾಯಿ ಗರ್ಭ, ಸ್ಮಶಾನ ಮಾತ್ರ ಸೇಫ್ : ಡೆತ್ ನೋಟ್ ಬರೆದಿಟ್ಟು ಬಾಲೆ ಆತ್ಮಹತ್ಯೆ

ಚೆನ್ನೈ: ಹೆಣ್ಣುಮಕ್ಕಳಿಗೆ ತಾಯಿಯ ಗರ್ಭ ಮತ್ತು ಸಮಾಧಿ ಮಾತ್ರ ಸುರಕ್ಷಿತವಾದ ಸ್ಥಳ ಎಂದು ಬಾಲಕಿಯೊಬ್ಬಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಚೆನ್ನೈನ ಪೂನಂ ಪ್ರದೇಶದಲ್ಲಿ ನಡೆದಿದೆ. ಮನೆಯಲ್ಲಿ ಲೈಂಗಿಕ ಕಿರುಕುಳ ತಾಳಲಾರದೆ ವಿದ್ಯಾರ್ಥಿನಿ ಈ ರೀತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ತಾಯಿ ಕೆಲಸಕ್ಕಾಗಿ ಮನೆಯಿಂದ ಹೊರಹೋದಾಗ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಶಾಲೆಯ ಶಿಕ್ಷಕಿಯ ಮಗ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಇದರಿಂದಾಗಿ 9ನೇ ತರಗತಿ ಓದುತ್ತಿದ್ದಾಗ ವಿದ್ಯಾರ್ಥಿನಿಯನ್ನು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ ವರ್ಗಾಯಿಸಲಾಗಿತ್ತು ಎಂದು ಪೋಷಕರು ತಿಳಿಸಿದ್ದಾರೆ.

ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ವಿದ್ಯಾರ್ಥಿನಿಗೆ ಸಂಬಂಧಿಕರಾಗಲಿ, ತರಗತಿಯವರಾಗಲಿ ನೆರವಿಗೆ ಬಂದಿರಲಿಲ್ಲ. ಇದರಿಂದಾಗಿ ಮನನೊಂದ ವಿದ್ಯಾರ್ಥಿನಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Edited By : Nirmala Aralikatti
PublicNext

PublicNext

20/12/2021 04:48 pm

Cinque Terre

31.33 K

Cinque Terre

0