ಚೆನ್ನೈ: ತಮಿಳುನಾಡಿನಲ್ಲಿ ಶಾಲಾ ವಿದ್ಯಾರ್ಥಿನಿಯರು ಬಸ್‌ನಲ್ಲಿ ಬಿಯರ್ ಕುಡಿಯುತ್ತಿರುವ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಚೆಂಗಲ್ಪಟ್ಟು ಜಿಲ್ಲಾ ಶಿಕ್ಷಣಾಧಿಕಾರಿಗಳು ಹಾಗೂ ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳು ಬಿಯರ್ ಬಾಟಲ್ ಹಿಡಿದು ಒಬ್ಬೊಬ್ಬರಾಗಿ ಕುಡಿಯುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ವಿದ್ಯಾರ್ಥಿನಿಯರು ಮಂಗಳವಾರ ತಿರುಕಝುಕುಂದ್ರಂನಿಂದ ಠಾಚೂರಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
24/03/2022 04:34 pm