ಮೈಸೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡವಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಣಸೂರು ತಾಲೂಕಿನ ಭೂತಾಳೆ ಪೆಂಜಳ್ಳಿ ಗ್ರಾಮದಲ್ಲಿ ನಡೆದಿದೆ.
ಭೂತಾಳೆ ಪೆಂಜಳ್ಳಿ ಗ್ರಾಮದ ವಿಜಯ್ ಎಂಬುವರ ಪುತ್ರ ಸಂಜಯ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಸಂಜಯ್ ನಾಗಪುರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ. ಇಂಗ್ಲಿಷ್, ಸಮಾಜ ವಿಜ್ಞಾನದಲ್ಲಿ ಅನುತ್ತೀರ್ಣ ಗೊಂಡಿದ್ದ ಹಿನ್ನೆಲೆಯಲ್ಲಿ ಮನನೊಂದು ತಮ್ಮ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ.
ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
20/05/2022 07:15 am