ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲೆಗೆ ಹೋಗಲು ಮನಸ್ಸಿಲ್ಲವೆಂದು ಕುಣಿಕೆಗೆ ಕೊರಳೊಡ್ಡಿದ 14ರ ಬಾಲಕ

ರಾಯಚೂರು: ಆನ್ ಲೈನ್ ಕ್ಲಾಸ್, ಕೊವಿಡ್ ಕಾರಣದಿಂದ ಮಕ್ಕಳು ಬಹುತೇಕ ಸಮಯವನ್ನು ಮನೆಯಲ್ಲಿಯೇ ಕಳೆದಿವೆ. ಇದು ಅವರ ಮನಸ್ಸಿನ ಮೇಲಿಯೂ ಪರಿಣಾಮ ಬೀರಿದೆ.ಸದ್ಯ ಎಲ್ಲವೂ ಸರಿ ಇರುವ ಕಾರಣ ಮಕ್ಕಳನ್ನು ಶಾಲೆಗೆ ಕಳುಹಿಸಲಾಗುತ್ತಿದೆ. ಇದರಲ್ಲಿ ಕೆಲ ಮಕ್ಕಲೂ ಇಷ್ಟಪಟ್ಟು ಶಾಲೆಗೆ ಹೋದರೆ ಇನ್ನು ಕೇಲವು ಮಕ್ಕಳು ಶಾಲಗೆ ಹೋಗಲು ಒಪ್ಪುತ್ತಿಲ್ಲ.

ಸದ್ಯ ಇಲ್ಲೋಬ ವಿದ್ಯಾರ್ಥಿ ಶಾಲೆಗೆ ಹೋಗಲು ಇಷ್ಟವಿಲ್ಲವೆಂದು ನೇಣಿಗೆ ಶರಣಾದ ಘಟನೆ ಮಲ್ಲದಗುಡ್ಡ ಸರ್ಕಾರಿ ಶಾಲಾ ಆವರಣದಲ್ಲಿ ನಡೆದಿದೆ. ಹೌದು ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಮಲ್ಲದಗುಡ್ಡ ಸರ್ಕಾರಿ ಶಾಲಾ ವಿದ್ಯಾರ್ಥಿ ಲಿಂಗಸೂಗುರು ತಾಲ್ಲೂಕಿನ ಅನ್ವರಿ ಗ್ರಾಮದ ಗಂಗಣ್ಣ(14) ಆತ್ಮಹತ್ಯೆ ಮಾಡಿಕೊಂಡ ಬಾಲಕ.

ಮಾನ್ವಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಈತ ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ವಾಸವಿದ್ದ, ಅಲ್ಲಿಂದಲ್ಲೇ ಶಾಲೆಗೆ ಹೋಗುತ್ತಿದ್ದ. ಬೆಳಿಗ್ಗೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದ ವಿದ್ಯಾರ್ಥಿ, ಸರ್ಕಾರಿ ಶಾಲೆಯ ಮೈದಾನದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
PublicNext

PublicNext

11/07/2022 10:04 pm

Cinque Terre

48.71 K

Cinque Terre

0