ದಾವಣಗೆರೆ: ಸರ್ಕಾರಿ ಐಟಿಐ ಕಾಲೇಜ್ ಹಣ ವಸೂಲಿಗೆ ಇಳಿದಿದೆ ಎಂಬ ಆರೋಪ ಕೇಳಿ ಬಂದಿದೆ.
ದಾವಣಗೆರೆ ಜಿಲ್ಲೆಯ ಮಾಯಕೊಂಡ ಸರ್ಕಾರಿ ಐಟಿಐ ಕಾಲೇಜ್‌ನಲ್ಲಿ ಈ ಘಟನೆ ನಡೆದಿದೆ. ಯಾವುದೇ ಭಯ ಇಲ್ಲದೆ ಕಾಪಿ ಚೀಟಿ ಇಟ್ಟುಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆದ ವಿಡಿಯೋ ವೈರಲ್ ಆಗಿದೆ.
ಪ್ರತಿಯೊಬ್ಬ ವಿದ್ಯಾರ್ಥಿಗಳಿಂದ 3 ಸಾವಿರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪವೂ ಕೇಳಿ ಬಂದಿದ್ದು, ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಸಲುವಾಗಿ ಹಣ ವಸೂಲಿಗೆ ಕಾಲೇಜ್ ಸಿಬ್ಬಂದಿ ಇಳಿದಿದ್ದಾರೆ ಎನ್ನಲಾಗಿದೆ.
ಅಲ್ಲದೇ, ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಕಾಪಿ ಚೀಟಿ ನೀಡಲಾಗುತ್ತೆ ಅಂತ ಹೇಳಿ ಹಣ ಪಡೆಯಲಾಗಿದ್ದು, ಕಾಪಿ ಚೀಟಿ ಇಟ್ಟುಕೊಂಡು ಪರೀಕ್ಷೆ ಬರೆಯುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಪ್ರಾಕ್ಟಿಕಲ್ ಪರೀಕ್ಷೆ ಇದ್ದ ವೇಳೆ ನಕಲು ಆಗಿದೆ. ಹಣ ಕೊಟ್ಟವರಿಗೆ ಮಾತ್ರ ಕಾಪಿ ಚೀಟಿ ನೀಡಿದ ಸಿಬ್ಬಂದಿಯ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.
PublicNext
08/08/2022 12:35 pm