ಲಕ್ನೋ: ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ಒತ್ತಾಯಿಸುತ್ತಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ಗಮನಿಸಿದ ಮುಖ್ಯ ಶಿಕ್ಷಣಾಧಿಕಾರಿ ಮಣಿರಾಮ್ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ.
ವಿಡಿಯೋದಲ್ಲಿ ಶಿಕ್ಷಕಯೊಬ್ಬ ವಿದ್ಯಾರ್ಥಿಗಳಿಗೆ ನಿಂದಿಸುತ್ತಿರುವುದು ಹಾಗೂ ವಿದ್ಯಾರ್ಥಿಗಳು ಕೇಳಿದಂತೆ ಮಾಡದಿದ್ದರೆ ಶೌಚಾಲಯಕ್ಕೆ ಬೀಗ ಹಾಕುವುದಾಗಿ ಬೆದರಿಕೆ ಹಾಕುತ್ತಿರುವುದನ್ನು ಕಾಣಬಹುದು.
PublicNext
08/09/2022 03:54 pm