ಸಣ್ಣ ಕಾರಣಕ್ಕೆ ಪಿಎಸ್‌ಐ ಒಬ್ಬರು ವ್ಯಕ್ತಿ ಮೇಲೆ ಅಮಾನುಷ ಹಲ್ಲೆ ನಡೆಸಿ ಅಶ್ಲೀಲವಾಗಿ ನಿಂದಿಸಿದ್ದಾರೆ. ಈ ಘಟನೆ ಆಗಸ್ಟ್ 10 ರಂದು ನಡೆದಿತ್ತು. ಹಲ್ಲೆ ಮಾಡಿದ್ದ ಪಿಎಸ್‌ಐ ಮಣಿಕಂಠರನ್ನು ಅಮಾನತುಗೊಳಿಸಲಾಗಿದೆ.
ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಕೋಲೂರು ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಮಾಜಿ ಶಾಸಕ ಸುರೇಶ್ ಬಾಬು ಅವರ ಬ್ಯಾನರ್‌ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಇದನ್ನು ಖಂಡಿಸಿದ ಕೆಲ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತಮ್ಮ ಸಿಬ್ಬಂದಿಯೊಂದಿಗೆ ಪಿಎಸ್‌ಐ ಮಣಿಕಂಠ ಅಲ್ಲಿಗೆ ತೆರಳಿದ್ದಾರೆ. ಇದೇ ವೇಳೆ ಮಣಿಕಂಠ ಅವರು ಸ್ಥಳದಲ್ಲಿದ್ದ ಹೊನ್ನೂರುಸ್ವಾಮಿ ಮೇಲೆ ಹಲ್ಲೆ ಮಾಡಿ ಅಶ್ಲೀಲ ಪದಗಳಿಂದ ಬೈದಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸೈದುಲು ಅಡಾವತ್ ಪಿಎಸ್‌ಐ ಮಣಿಕಂಠರನ್ನು ಅಮಾನತುಗೊಳಿಸಿದ್ದಾರೆ.
PublicNext
13/08/2022 01:31 pm