ಚಾಮರಾಜನಗರ: ಜಿಲ್ಲಾ ಹಾಲು ಒಕ್ಕೂಟ (ಚಾಮುಲ್)ದಲ್ಲಿ ನಡೆದಿರುವ ಅಕ್ರಮ ನೇಮಕಾತಿ ಸಂಬಂಧ ಶಾಸನಬದ್ಧ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸಹಕಾರ ಸಂಘಗಳ ಜಂಟಿ ನಿಬಂಧಕರು ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಚಾಮರಾಜನಗರ ಜಿಲ್ಲಾಭಿವೃದ್ಧಿ ಹೋರಾಟ ಸಮಿತಿಯ ಕಾರ್ಯಕರ್ತರು, ಚಾಮುಲ್ ಅಕ್ರಮ ನೇಮಕಾತಿ ನಡೆದಿದೆ ಎಂದು ಆರೋಪ ನಡೆಸಿ ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ಸಲ್ಲಿಸಿತ್ತು.
PublicNext
13/02/2021 03:22 pm