ಚಿಕ್ಕಮಗಳೂರು: ತರೀಕೆರೆಯ ಕಂದಾಯ ನಿರೀಕ್ಷಕರಾಗಿ ಕೆಲಸ ಮಾಡುತ್ತಿದ್ದ ಸೋಮಶೇಖರ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮಶೇಖರ್ ಒಂದು ರೀತಿ ಬಡವರ ಪಾಲಿನ ಬಂಧುವಾಗಿದ್ದರು. ಅವರು ಸ್ಥಳೀಯ ರಾಜಕೀಯ ಮುಖಂಡರಾದ ಧನ್ಪಾಲ್, ರಮೇಶ್, ಸಂಜೀವ್ ಕುಮಾರ್ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಲಕ್ಕವಳ್ಳಿಯ ರಂಗನಾಥ ಸ್ವಾಮಿ ದೇವಸ್ಥಾನ ಪಕ್ಕದ ಭದ್ರಾ ಜಲಾಶಯಕ್ಕೆ ಹಾರಿ ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಕ್ರಮವಾಗಿ ಬಗರ್ ಹುಕುಂ ಜಮೀನುಗಳನ್ನು ಸಕ್ರಮ ಮಾಡಿಕೊಳ್ಳುವಂತೆ ಸ್ಥಳೀಯ ರಾಜಕೀಯ ಮುಖಂಡರು ಒತ್ತಡ ಹೇರುತ್ತಿದ್ದರು. ಜನರಿಂದ ಲಕ್ಷಗಟ್ಟಲೆ ಹಣವನ್ನು ತೆಗೆದುಕೊಂಡು ದಾಖಲೆ ಮಾಡಿಕೊಡುವಂತೆ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
ಸೋಮಶೇಖರ್ ಅವರ ಆತ್ಮಹತ್ಯೆ ಸುದ್ದಿ ಕೇಳುತ್ತಿದ್ದಂತೆ ನೂರಾರು ಜನರು ಜಲಾಶಯದ ಬಳಿ ಜಮಾಯಿಸಿದರು. ಅಷ್ಟೇ ಅಲ್ಲದೆ ಲಕ್ಕವಳ್ಳಿ ಪೊಲೀಸ್ ಠಾಣೆ ಎದುರು ಆರೋಪಿಗಳನ್ನ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
PublicNext
26/08/2021 10:38 am