ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ನನ್ನ ಸಾವಿಗೆ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್ ಕಾರಣ': ಡೆತ್‌ನೋಟ್ ಬರೆದಿಟ್ಟು FDA ನಾಪತ್ತೆ

ಶಿವಮೊಗ್ಗ: 'ನನ್ನ ಸಾವಿಗೆ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್ ಕಾರಣ' ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯೊಬ್ಬರು ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾರೆ.

ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) 39 ವರ್ಷದ ಗಿರಿರಾಜ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕರು, ವಿಧಾನ ಪರಿಷತ್‌ ಸದಸ್ಯರ ನಿಧಿಯ ನಿರ್ವಹಣಾ ವಿಭಾಗ ನೋಡಿಕೊಳ್ಳುತ್ತಿದ್ದರು. ಆದರೆ ಇಂದು ಬೆಳಗ್ಗೆ ಮನೆಯಿಂದ ಹೊರಟವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಚೇರಿ ಸಹೋದ್ಯೋಗಿಗಳಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ.

'ಜಿಲ್ಲಾಧಿಕಾರಿ ಕಚೇರಿಯಲ್ಲಿನ ಕೆಲಸದ ಒತ್ತಡ, ಸರ್ಕಾರಿ ವ್ಯವಸ್ಥೆಯಲ್ಲಿನ ಲೋಪ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಕೊರತೆ, ಕೆಲಸದ ಒತ್ತಡಗಳ ಮಧ್ಯೆ ಕುಟುಂಬದ ಸದಸ್ಯರಿಗೆ ಸಮಯ ನೀಡಲು ಸಾಧ್ಯವಾಗದಿರುವುದು. ಕೆಳ ಹಂತದ ಅಧಿಕಾರಿಗಳನ್ನು ಹೇಗೆ ಬಲಿಪಶು ಮಾಡಲಾಗುತ್ತದೆ. ನನ್ನನ್ನು ಯಾರೂ ಹುಡುಕುವ ಪ್ರಯತ್ನ ಮಾಡಬೇಡಿ. ನಾನು ಆತ್ಮಹತ್ಯೆ ಮಾಡಿಕೊಳ್ಳಲು ಹೋಗುತ್ತಿದ್ದೇನೆ. ನನ್ನ ಸಾವಿಗೆ ಐಎಎಸ್‌ ಅಧಿಕಾರಿ ಡಾ.ಶಾಲಿನಿ ರಜನೀಶ್ ನೇರ ಕಾರಣ' ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.

ಸಂದೇಶ ನೋಡಿದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ತಕ್ಷಣ ಜಯನಗರ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, 'ಗಿರಿರಾಜ್ ಅವರ ಮೊಬೈಲ್ ಭದ್ರಾವತಿ ತಾಲ್ಲೂಕು ಯಡೇಹಳ್ಳಿ ಸಮೀಪ ಸ್ವಿಚ್ಡ್‌ ಆಫ್‌ ಆಗಿದೆ. ಪತ್ತೆಗೆ ಪೊಲೀಸರು, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ' ಎಂದಿದ್ದಾರೆ.

Edited By : Vijay Kumar
PublicNext

PublicNext

28/09/2021 08:41 pm

Cinque Terre

78.34 K

Cinque Terre

5