ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಂಬೆಳಗ್ಗೆ ರಾಜ್ಯಾದ್ಯಂತ ಒಟ್ಟು 60 ಕಡೆ ಎಸಿಬಿ ದಾಳಿ

ಬೆಂಗಳೂರು: ನಗರದಲ್ಲಿ ಬೆಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿಗೆ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಕಾಲ ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

15 ಅಧಿಕಾರಿಗಳ ಮೇಲೆ ನಿರಂತರ ದೂರು ಬಂದ ಹಿನ್ನೆಲೆ, 8 ಜನ ಎಸಿಬಿ, 100 ಎಸ್​ಪಿ, 300 ಜನ ಸಿಬ್ಬಂದಿ ಸೇರಿ ಒಟ್ಟು 408 ಜನರಿಂದ ದಾಳಿ ನಡೆಯಲಿದೆ.

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದು, ಒಟ್ಟು 60 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಲಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ಮಾಡಲಿದ್ದು, ಬಳಿಕ ಪರಿಶೀಲನೆಗೂ ಮುಂದಾಗಲಿದ್ದಾರೆ. ಮಂಗಳೂರು ಸ್ಮಾರ್ಟ್‌ ಸಿಟಿ ಇಇ ಕೆ.ಎಸ್.ಲಿಂಗೇಗೌಡ, ಮಂಡ್ಯ ಹೆಚ್‌ಎಲ್‌ಬಿಸಿ ಇಇ ಕೆ.ಶ್ರೀನಿವಾಸ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ, ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್, ಗದಗ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಸ್ತಿ ತಂಡದಿಂದ ದಾಳಿ ನಡೆಯಲಿದೆ.

Edited By : Vijay Kumar
PublicNext

PublicNext

24/11/2021 08:47 am

Cinque Terre

43.93 K

Cinque Terre

6

ಸಂಬಂಧಿತ ಸುದ್ದಿ