ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿ: ಕಚೇರಿಯಲ್ಲೇ ಮಹಿಳೆ ಆತ್ಮಹತ್ಯೆಗೆ ಯತ್ನ

ಪಾಟ್ನಾ: ಜಮೀನು ದಾಖಲೆ ಪತ್ರಗಳನ್ನು ಸರಿ ಪಡಿಸಿಕೊಡಲು ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ‌ ಎನ್ನಲಾಗಿದೆ. ಈ‌ ಕಾರಣಕ್ಕೆ ಮಹಿಳೆಯೊಬ್ಬರು ಬೇಸತ್ತು ಸರಕಾರಿ ಕಚೇರಿಯಲ್ಲೇ ಅರೆಬೆತ್ತಲಾಗಿ ಸೀಮೆ‌ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಈ ಘಟನೆ ಬಿಹಾರದ ಪಾಟ್ನಾ ನಗರದ ಸಂಪತ್‌ಚಕ್ ಕ್ಲಾಕ್ ವಲಯ ಅಧಿಕಾರಿ ಕಚೇರಿಯಲ್ಲಿ ನಡೆದಿದೆ‌. ಮಹಿಳೆ ಸುಮಾರು ದಿನಗಳಿಂದ ತನ್ನ ಕೆಲಸಕ್ಕಾಗಿ ಸರಕಾರಿ ಕಚೇರಿಗೆ ಅಲೆದಾಡಿದ್ದಾರೆ. ಆದರೆ ವಲಯ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಹೀಗಾಗಿ ಬೇಸತ್ತ ಮಹಿಳೆ ಕಚೇರಿಯಲ್ಲೇ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ‌. ನಂತರ ಅಲ್ಲಿಗೆ ದೌಡಾಯಿಸಿದ ಪೊಲೀಸರು ಮಹಿಳೆಯನ್ನು ಸಮಾಧಾನಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಇತ್ತೀಚಗಷ್ಟೇ ನಡೆದ ಈ ಘಟನೆಯ ವಿಡಿಯೋ ಈಗ ವೈರಲ್ ಆಗುತ್ತಿದೆ.

Edited By : Nagaraj Tulugeri
PublicNext

PublicNext

03/08/2022 05:47 pm

Cinque Terre

63.39 K

Cinque Terre

3