ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದು ತನಿಖೆಗೆ ಸಮಿತಿ ರಚನೆ ಮಾಡಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ರೋಹಿಗಳಿಂದ ವಿವಿಧ ರೂಪದಲ್ಲಿ ಸಂಗ್ರಹಿಸಿದ ಹಣವನ್ನು ಬ್ಯಾಂಕ್ ಗೆ ಜಮೆ ಮಾಡದೆ ಅವ್ಯವಹಾರ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. 2016ರಿಂದ 2022 ರವರೆಗೆ ವ್ಯಾಪಕ ಭ್ರಷ್ಟಚಾರ ನಡೆಸಲಾಗಿದೆ,ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯಿಂದ ಸಾಕಷ್ಟು ಅವ್ಯವಹಾರ ನಡೆದಿವೆ ಎಂದು ವ್ಯಾಪಕ ಆರೋಪಗಳು ಕೇಳಿ ಬಂದ ಹಿನ್ನಲೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಟಿ.ಎ ವೀರಭದ್ರಯ್ಯ ಹಾಗೂ ವಿಷಯ ನಿರ್ವಾಹಕ ಹರೀಶ್ ವಿರುದ್ದ ದೂರುಗಳು ಕೇಳಿಬಂದಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ತನಿಖೆಗೆ ಆದೇಶಿಸಿದ್ದಾರೆ.
ಅಪರ ಜಿಲ್ಲಾಧಿಕಾರಿ ಚನ್ನ ಬಸಪ್ಪ ಅಧ್ಯಕ್ಷತೆಯಲ್ಲಿ ತುಮಕೂರು ಮಹಾನಗರ ಪಾಲಿಕರ ಪಾಲಿಕೆ ಮುಖ್ಯ ಲೆಕ್ಕಾಧಿಕಾರಿ ಗುರುಬಸವೇಗೌಡ, ಜಿ.ಪಂ ಲೆಕ್ಕಾಧಿಕಾರಿ ನಾಗೇಶ್, ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ್ ವಸಂತರಾಜು ಅವರನ್ನೊಳಗೊಂಡ ತನಿಖಾ ತಂಡ ರಚಿಸಿದ್ದು ತನಿಖೆ ಮಾಡಿ ಒಂದು ವಾರದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
PublicNext
23/08/2022 01:26 pm