ಲಕ್ನೋ: ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಯುವತಿಯ ಮೇಲೆ ಕಾಮುಕರ ಅಟ್ಟಹಾಸ ಮೆರೆದು ಸಾವಿಗೆ ಕಾರಣವಾಗಿರುವ ಕುರಿತು ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಹತ್ರಾಸ್ ಜಿಲ್ಲಾಧಿಕಾರಿ ಸಂತ್ರಸ್ತೆಯ ಕುಟುಂಬಸ್ಥರಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಂತ್ರಸ್ತೆಯ ಮನೆಗೆ ಬಂದ ಹತ್ರಾಸ್ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಲಕ್ಷ್ಕರ್ ಯುವತಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಬದಲು ಹೇಳಿಕೆ ಬದಲಿಸುವಂತೆ ಒತ್ತಾಯಿಸಿದ್ದಾರೆ. "ಈಗ ನಿಮ್ಮೊಂದಿಗಿರುವ ಮಾಧ್ಯಮಗಳು ಕಾನೂನು ಹೋರಾಟ ಮಾಡೋಣ ಎಂದು ಹೇಳುತ್ತವೆ. ಆದರೆ ಎರಡ್ಮೂರು ದಿನಗಳಲ್ಲಿ ಹೊರಟು ಹೋಗುತ್ತವೆ. ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ನಿಮ್ಮ ಹೇಳಿಕೆಯನ್ನು ಬದಲಾಯಿಸುತ್ತಿರೋ ಇಲ್ಲವೋ ಎನ್ನುವುದು ನಿಮಗೆ ಬಿಟ್ಟಿದ್ದು" ಎಂದು ಹೇಳಿದ್ದಾರೆ.
ಈ ವಿಡಿಯೋವನ್ನು ಟ್ವೀಟ್ ಮಾಡಿರುವ ನೆಟ್ಟಿಗರು, ಜಿಲ್ಲಾಧಿಕಾರಿ ಸಂತ್ರಸ್ತೆಯ ಕುಟುಂಬಸ್ಥರನ್ನು ಬೆದರಿಸುವ ಕ್ಯಾಮೆರಾದಲ್ಲಿ ಸಿಕ್ಕಿಬಿದ್ದಿದೆ. ಹಿರಿಯ ಅಧಿಕಾರಿಗಳ ವರ್ತನೆಯೇ ಹೀಗಿದ್ದ ಮೇಲೆ ನ್ಯಾಯಯುತ ತನಿಖೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
PublicNext
01/10/2020 08:20 pm