ಹಾಸನ: ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಪೊಲೀಸರು ಸಿನಿಮೀಯ ರೀತಿ ರಕ್ಷಿಸಿದ ಘಟನೆ ಗೊರೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಕಾಸರಗೋಡಿನಲ್ಲಿ ವ್ಯಕ್ತಿಯೊಬ್ಬರನ್ನು ಕಿಡ್ನಾಪ್ ಮಾಡಿದ್ದ ದುಷ್ಕರ್ಮಿಗಳು ಕಾರ್‌ನಲ್ಲಿ ಮಡಿಕೇರಿ ಮಾರ್ಗವಾಗಿ ಹಾಸನದ ಕಡೆಗೆ ಹೋಗುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಗೊರೂರು ಪೋಲಿಸ್ ಠಾಣೆಯ ಪಿಎಸ್‌ಐ ಎಸ್.ಎಲ್.ಸಾಗರ್ ಮತ್ತು ಸಿಬ್ಬಂದಿಯು ರಾಜ್ಯ ಹೆದ್ದಾರಿಗೆ ಲಾರಿಯನ್ನು ಅಡ್ಡಲಾಗಿ ನಿಲ್ಲಿಸಿ ಕಾರ್ ಅಡ್ಡ ಹಾಕಿದ್ದಾರೆ. ಈ ಸಂದರ್ಭದಲ್ಲಿ ಕಿಡ್ನಾಪ್ ಆಗಿದ್ದ ವ್ಯಕ್ತಿ ಕಾರಿನಿಂದ ಜಿಗಿದಿದ್ದಾರೆ. ಆದರೆ ಕಿಡ್ನಾಪರ್ಸ್ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದಾರೆ.
ಗೊರೂರು ಪೊಲೀಸ್ ಸಿಬ್ಬಂದಿಯ ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
PublicNext
29/07/2021 09:44 am