ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಕ್ ನಲ್ಲಿ ಹಿಂದೂ ದೇವಾಲಯ ಧ್ವಂಸ, ಓರ್ವ ಅರೆಸ್ಟ್

ಸಿಂಧ್ ಪ್ರಾಂತ್ಯ(ಪಾಕಿಸ್ತಾನ): ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿರುವ ಹಿಂದೂ ದೇವಾಲಯವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು ಓರ್ವನನ್ನು ಬಂಧಿಸಲಾಗಿದೆ ಅಲ್ಲಿನ ಪತ್ರಿಕೆ ದಿ ಎಕ್ಸ್ ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಸಿಂಧ್ ಪ್ರಾಂತ್ಯದ ಬದಿನ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಇರುವ ಹಿಂದೂ ದೇವಾಲಯದ ಮೂರ್ತಿಗಳನ್ನು ಮೊಹಮ್ಮದ್ ಇಸ್ಮಾಯಿಲ್ ಎಂಬ ವ್ಯಕ್ತಿ ಧ್ವಂಸ ಮಾಡಿದ್ದಾರೆ ಎಂದು ಅಶೋಕ್ ಕುಮಾರ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಬದಿನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಮಾನಸಿಕ ಸ್ಥಿರತೆ ಇರುವವನೇ, ಉದ್ದೇಶಪೂರ್ವಕವಾಗಿ ದೇವರ ಮೂರ್ತಿಗಳನ್ನು ಧ್ವಂಸ ಮಾಡಿದ್ದಾನೆಯೇ ಎಂದು ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಈ ಮಧ್ಯೆ, ಬದಿನ್ ಹಿರಿಯ ಎಸ್ಪಿ ಶಬೀರ್ ಸೆತರ್, ಘಟನೆ ಬಗ್ಗೆ ವರದಿ ಕೇಳಿದ್ದಾರೆ. ಪಾಕಿಸ್ತಾನದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದು ಸಿಂಧ್ ಪ್ರಾಂತ್ಯದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಹಿಂದೂಗಳ ಮೇಲೆ ಆಗಾಗ ದಾಳಿಗಳು ನಡೆಯುತ್ತಲೇ ಇವೆ.

Edited By : Nirmala Aralikatti
PublicNext

PublicNext

12/10/2020 09:45 am

Cinque Terre

79.84 K

Cinque Terre

2

ಸಂಬಂಧಿತ ಸುದ್ದಿ