ಕುಂಡುಜ್: ಅಫ್ಘಾನಿಸ್ತಾನದ ಈಶಾನ್ಯ ಕುಂಡುಜ್ ಪ್ರಾಂತ್ಯದ ಮಸೀದಿಯಲ್ಲಿ ಶುಕ್ರವಾರ ಸಂಭವಿಸಿದ ಮಾರಣಾಂತಿಕ ಸ್ಫೋಟದಲ್ಲಿ ಕನಿಷ್ಠ 50 ಜನರು ಮೃತಪಟ್ಟಿದ್ದು, 90ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್ ಪಿ ವರದಿ ಮಾಡಿದೆ.
ಕುಂಡುಜ್‌ನಲ್ಲಿ “ನಮ್ಮ ಶಿಯಾ ದೇಶವಾಸಿಗಳ ಮಸೀದಿಯಲ್ಲಿ ಸ್ಫೋಟ ಸಂಭವಿಸಿದಾಗ” ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ.
PublicNext
08/10/2021 06:58 pm