ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಶುರುವಾಗಿದೆ. 20ಕ್ಕೂ ಹೆಚ್ಚು ಹಿಂದೂಗಳ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಕಾರುಗಳಿಗೂ ಬೆಂಕಿ ಹಚ್ಚಿದ ದಷ್ಕರ್ಮಿಗಳು ಆಸ್ತಿ-ಪಾಸ್ತಿಗೆ ಹಾನಿ ಮಾಡಿದ್ದಾರೆ.
ಬಾಂಗ್ಲಾದೇಶ ರಾಜಧಾನಿ ಢಾಕಾದಿಂದ 255 ಕಿ.ಮೀ ದೂರದ ಪಟ್ಟಣದಲ್ಲಿ ಈ ಹಿಂಸಾಚಾರ ನಡೆದಿದೆ. ಯುವಕನೊಬ್ಬ ಫೇಸ್ ಬುಕ್ ಪೋಸ್ಟ್ ನಲ್ಲಿ ಧರ್ಮನಿಂದನೆ ಮಾಡಿದ್ದಾನೆ ಎಂಬ ಆರೋಪದ ಹಿನ್ನೆಲೆ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕಳೆದ ಭಾನುವಾರ ರಾತ್ರಿ ಈ ದಾಳಿ ನಡೆದಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳೀಯ ಜನರಿಗೆ ರಕ್ಷಣೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ 66 ಮನೆಗಳಿಗೆ ಬೆಂಕಿ ಇಡಲಾಗಿದೆ. ಇದರಲ್ಲಿ 20 ಮನೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. 400ಕ್ಕೂ ಹೆಚ್ಚು ಜನರ ಮೇಲೆ ದೂಉ ದಾಖಲಾಗಿದೆ.
PublicNext
19/10/2021 03:18 pm