ಇಸ್ಲಾಮಾಬಾದ್: ಪಾಕಿಸ್ತಾನದ ಪೇಶಾವರದ ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಬಳಿ ಮಸೀದಿಯೊಂದರಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಮತ್ತು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಈ ದಾಳಿಯಲ್ಲಿ ಕನಿಷ್ಠ 194 ಜನರು ಗಾಯಗೊಂಡಿದ್ದು, ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಆತ್ಮಹತ್ಯಾ ಬಾಂಬರ್ ತನ್ನ ದೇಹಕ್ಕೆ ಐದು ಕಿಲೋಗ್ರಾಂಗಳಷ್ಟು ಸ್ಫೋಟಕಗಳಿಂದ ತುಂಬಿದ ಶಕ್ತಿಶಾಲಿ ಸ್ಫೋಟಕ ಸಾಧನವನ್ನು ಕಟ್ಟಿಕೊಂಡಿದ್ದನು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಸೀದಿ ಮೇಲಿನ ದಾಳಿಯನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತೀವ್ರವಾಗಿ ಖಂಡಿಸಿದ್ದಾರೆ ಎಂದಿರುವ ಪಾಕಿಸ್ತಾನ ಪ್ರಧಾನ ಮಂತ್ರಿಗಳ ಕಚೇರಿ, ತುರ್ತು ವೈದ್ಯಕೀಯ ಸೇವೆ ನೀಡಲು ಆದೇಶಿಸಿರುವುದಾಗಿ ತಿಳಿಸಿದೆ.
PublicNext
05/03/2022 07:27 am