ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ 18 ವರ್ಷದ ಹಿಂದೂ ಯುವತಿಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಸುಕ್ಕೂರ್ ಅನ್ನೋ ಪ್ರದೇಶದಲ್ಲಿ ಈ ಕೃತ್ಯ ನಡೆದಿತ್ತು. ದುಷ್ಕರ್ಮಿಗಳು 18 ವಯಸ್ಸಿನ ಪೂಜಾ ಕುಮಾರಿ ಓಧ್ ಅನ್ನೋ ಯುವತಿಯನ್ನು ಅಪಹರಣ ಮಾಡಿ ಹಾಗೂ ಬಲವಂತದ ಮತಾಂತರಕ್ಕೆ ಯತ್ನಿಸಿದ್ದರು. ಆದರೆ ಅಪಹರಣದ ವೇಳೆ ಯುವತಿ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಪಾಪಿಗಳು ನಿಷ್ಕರುಣೆಯಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದರು ಎಂದು ಪಾಕಿಸ್ತಾನದ ಕೆಲ ಮಾಧ್ಯಮಗಳು ವರದಿ ಮಾಡಿದ್ದವು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದು, ಓರ್ವ ಶಂಕಿತ ಆರೋಪಿಯನ್ನು ಬಂಧಿಸಿದ್ದಾರೆ.
PublicNext
23/03/2022 03:16 pm