ವಾಷಿಂಗ್ಟನ್: ಚಿಕಾಗೊದ ಹೈಲ್ಯಾಂಡ್ ಪಾರ್ಕ್‌ನಲ್ಲಿ ಸೋಮವಾರ ನಡೆದ ಅಮೆರಿಕ ಸ್ವಾತಂತ್ರ್ಯೋತ್ಸವ ದಿನದ ಪಥಸಂಚಲನದ ಮೇಲೆ ಮನಸೋಇಚ್ಛೆ ಗುಂಡಿನ ದಾಳಿ ನಡೆಸಿದ್ದ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯದಲ್ಲಿ ಆರು ಮಂದಿ ಮೃತಪಟ್ಟಿದ್ದು, 48 ಮಂದಿ ಗಾಯಗೊಂಡಿದ್ದಾರೆ.
ಬಂಧಿತನನ್ನು ರಾಬರ್ಟ್ ಕ್ರಿಮೊ (22) ಎಂದು ಗುರುತಿಸಲಾಗಿದೆ ಎಂದು ಲೇಕ್ ಕೌಂಟಿಯ ಪೊಲೀಸರು ಮಾಹಿತಿ ನೀಡಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಾಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳೂ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಶಂಕಿತ ದಾಳಿಕೋರ ಕಟ್ಟಡದ ಚಾವಣಿಯಲ್ಲಿ ನಿಂತು ದಾಳಿ ನಡೆಸಿದ್ದ. ಸರಿಸುಮಾರು 10 ನಿಮಿಷಗಳ ಕಾಲ ಗುಂಡಿನ ದಾಳಿ ನಡೆದಿದೆ. ಈ ದಾಳಿ ನಡೆಯುತ್ತಲೇ ಜನ ಭಯಭೀತರಾಗಿ ಅಲ್ಲಿಂದ ಕಾಲ್ಕಿತ್ತಿದ್ದ.
PublicNext
05/07/2022 10:24 am