ಕಾಬೂಲ್: ತಾಲಿಬಾನ್ ಕಮಾಂಡರ್ ಜೊತೆ ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ ತಂದೆ ಮೇಲೆ ಭೀಕರ ಹಲ್ಲೆ ಮಾಡಲಾಗಿದೆ. ಅಪ್ಘಾನಿಸ್ತಾನದ ಹೆರಾತ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ವಿಡಿಯೋ ವೈರಲ್ ಆಗುತ್ತಿದೆ.
ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ತಂದೆಯನ್ನು ಮಲಗಿಸಿ ಅಂಗಾಲಿನ ಮೇಲೆ ಭೀಕರವಾಗಿ ಹಲ್ಲೆ ಮಾಡುತ್ತಿರುವ ದೃಶ್ಯ ಇದಾಗಿದೆ. ತಾಲಿಬಾನಿಗಳ ಮೃಗೀಯ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
PublicNext
07/09/2022 09:37 am