ವಾಷಿಂಗ್ಟನ್ : ಕ್ಯಾಲಿಫೋರ್ನಿಯಾದಲ್ಲಿ ಅಪಹರಣವಾಗಿದ್ದ ಭಾರತ ಮೂಲದ ಸಿಖ್ ಕುಟುಂಬದ ನಾಲ್ವರ ಮೃತದೇಹ ಬುಧವಾರ ತೋಟವೊಂದರ ಸಮೀಪ ಪತ್ತೆಯಾಗಿದೆ. ಎಂಟು ತಿಂಗಳ ಮಗುವನ್ನು ಕೂಡ ಹತ್ಯೆ ಮಾಡಲಾಗಿದೆ.8 ತಿಂಗಳ ಮಗು ಅರೂಹಿ ಧೇರಿ ಮತ್ತು ಪೋಷಕರಾದ ಜಸ್ಲೀನ್ ಕೌರ್ (27), ಜಸ್ದೀಪ್ ಸಿಂಗ್ (36) ಹಾಗೂ ಚಿಕ್ಕಪ್ಪ ಅಮನದೀಪ್ ಸಿಂಗ್ (39) ಅವರನ್ನು ಕೆಲ ದಿನಗಳ ಹಿಂದೆ ಅಪಹರಿಸಲಾಗಿತ್ತು. ಈಗ ಹಣ್ಣಿನ ತೋಟವೊಂದರಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ.
ತೋಟದ ರೈತ ಶವಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕುಟುಂಬದವರನ್ನು ಅಪಹರಿಸಿದ ಒಂದು ದಿನದ ನಂತರ ಪೊಲೀಸರು, ಜೀಸಸ್ ಮ್ಯಾನುಯೆಲ್ ಸಲ್ಗಾಡೊ ಹೆಸರಿನ ಶಂಕಿತನನ್ನು ಬಂಧಿಸಿದ್ದರು. ಈ ವೇಳೆ ಬಂಧಿತ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಪ್ರಾಣಾಪಾಯದಿಂದ ಉಳಿಸಿದ ಪೊಲೀಸರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
PublicNext
07/10/2022 01:19 pm