ಬೆಂಗಳೂರು: ಮಹಿಳಾ ತಹಶೀಲ್ದಾರ್ ಹಾಗೂ ಕ್ಲರ್ಕ್ 7 ಲಕ್ಷ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೆಜಿ ರೋಡ್‌ನಲ್ಲಿರುವ ತಹಶೀಲ್ದಾರ್ ಕಚೇರಿಯ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಆರೋಪಿಗಳು ಜಮೀನು ಆರ್.ಟಿ.ಸಿ ಮಾಡಿ ಕೊಡುವ ಕೆಲಸಕ್ಕೆ ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಅದರಂತೆ ಇಂದು ತನ್ನ ಪಾಲಿನ 5 ಲಕ್ಷ ಹಣವನ್ನು ಪಡೆಯುವಾಗ ಲಕ್ಷ್ಮೀ ರೇಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ಇತ್ತ 2 ಲಕ್ಷ ಲಂಚ ಪಡೆದ ಪ್ರಸನ್ನಕುಮಾರ್ ಕೂಡ ಎಸಿಬಿ ಬಲೆಗೆ ಬಿದ್ದಿದ್ದಾರೆ. ನಿವೃತ್ತಿಗೆ ಕೇವಲ 20 ದಿನಗಳು ಬಾಕಿ ಇರುವಾಗಲೇ ಲಕ್ಷ್ಮೀ ಎಸಿಬಿ ಬಲೆಗೆ ಬಿದ್ದಿದ್ದಾರೆ.
PublicNext
06/10/2020 08:10 pm