ಮುಂಬೈ: ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿ ಸೇರಿದಂತೆ ಎಲ್ಲಾ ಮೂವರು ಆರೋಪಿಗಳನ್ನು ಮಹಾರಾಷ್ಟ್ರ ಪೊಲೀಸರು ಬುಧವಾರ ರಾತ್ರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ಈ ವೇಳೆ ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಅಲಿಬಾಗ್ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ಪ್ರಕಟಿಸಿದೆ.
ಅರ್ಕಿಟೆಕ್ಟ್ ಅನ್ವಯ್ ನಾಯಕ್ 2018ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.
ತನ್ನ ಆತ್ಮಹತ್ಯೆಗೆ ಅರ್ನಾಬ್ ಗೋಸ್ವಾಮಿ, ಮತ್ತಿಬ್ಬರು ಕಾರಣ ಎಂದು ಹೇಳಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ.
ವಾದ - ವಿವಾದ ಆಲಿಸಿದ ನ್ಯಾಯಾಲಯ ಗೋಸ್ವಾಮಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿತು.
PublicNext
05/11/2020 07:20 am