ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣದ ಆರೋಪಿಯಾದ ಮಾಜಿ ಮೇಯರ್ ಆರ್.ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಆರೋಪಿಯಾದ ಸಂಪತ್ ರಾಜ್ ಕೊರೊನಾ ಸೋಂಕು ತಗುಲಿರುವುದಾಗಿ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಏಕಾಏಕಿ ಬಿಡುಗಡೆ ಆಗಿ ಪರಾರಿಯಾಗಿದ್ದ.
'ಪ್ರಮುಖ ಆರೋಪಿಯಾದ ಸಂಪತ್ ರಾಜ್, ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ. ಆತನ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದರು.
ಸೋಮವಾರ ಸಂಜೆ ಆತ ಪುಲಿಕೇಶಿನಗರದಲ್ಲಿರುವ ತನ್ನ ಮನೆಗೆ ಬಂದಿದ್ದ. ಆ ಮಾಹಿತಿ ತಿಳಿಯುತ್ತಿದ್ದಂತೆ ದಾಳಿ ಮಾಡಿ ಬಂಧಿಸಲಾಗಿದೆ' ಎಂದೂ ಸಿಸಿಬಿ ಮೂಲಗಳು ತಿಳಿಸಿವೆ.
ಆರೋಪಿಯನ್ನು ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ
PublicNext
17/11/2020 07:14 am