ಬೆಂಗಳೂರು: ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಲಂಚ ಪಡೆದಿದ್ದರು ಎಂಬ ಆರೋಪದಲ್ಲಿ ಕೆಎಎಸ್ ಅಧಿಕಾರಿ ಡಾ. ಸುಧಾ ಅವರ ಮನೆ ಮೇಲೆ ನ. 7ರಂದು ಎಸಿಬಿ ದಾಳಿ ನಡೆಸಲಾಗಿತ್ತು.
ಇಂದು ಮತ್ತೆ ಸುಧಾಗೆ ಎಸಿಬಿ ಶಾಕ್ ನೀಡಿದೆ. ಇಂದು ಬೆಳ್ಳಂಬೆಳಗ್ಗೆ ಸುಧಾ ಸಂಬಂಧಿಕರು ಮತ್ತು ಆಪ್ತರ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ.
ಬೆಂಗಳೂರು ಸೇರಿದಂತೆ 9 ಕಡೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಕೆಲ ದಿನಗಳ ಹಿಂದೆ ಎಸಿಬಿ ರೇಡ್ ಮಾಡಿತ್ತು. ಈ ವೇಳೆ ಕೆಜಿಗಟ್ಟಲೇ ಚಿನ್ನಾಭರಣ ಹಾಗೂ ನೂರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಲಭ್ಯವಾಗಿತ್ತು.
ಪ್ರಾಥಮಿಕ ತನಿಖೆ ನಡೆಸಿದ ಎಸಿಬಿ ಮತ್ತೆ ಇಂದು ಸುಧಾ ಅವರ ಆರು ಏಜೆಂಟ್ ಗಳ ಮನೆ ಸೇರಿದಂತೆ ಒಂಭತ್ತು ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿದೆ.
PublicNext
24/11/2020 11:30 am