ಕಲಬುರಗಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸಿದ ಮುಷ್ಕರ ವೇಳೆ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ದೈಹಿಕ ಹಲ್ಲೆ ಮಾಡಿ, ಬಸ್ ಗಳನ್ನು ಜಖಂಗೊಳಿಸಿದ ಆರೋಪದಡಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಒಂಬತ್ತು ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಬೀದರ ವಿಭಾಗದ ಐವರು, ಕೊಪ್ಪಳ ವಿಭಾಗದ ಇಬ್ಬರು, ಬಳ್ಳಾರಿ ಹಾಗೂ ವಿಜಯಪುರ ವಿಭಾಗದ ತಲಾ ಓರ್ವ ಸಿಬ್ಬಂದಿ ಸೇರಿ ಒಟ್ಟು 9 ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಲಾಗಿದೆ.
ಅಹಿತಕರ ಘಟನೆಗಳಲ್ಲಿ ಭಾಗಿಯಾದ ಬಗ್ಗೆ ಎಫ್ ಐ ಆರ್ ದಾಖಲಾದ ಹಿನ್ನೆಲೆಯಲ್ಲಿ ಇವರನ್ನು ಅಮಾನತುಗೊಳಿಸಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಕೂರ್ಮಾರಾವ್ ಎಂ. ತಿಳಿಸಿದ್ದಾರೆ.
PublicNext
18/12/2020 10:38 pm