ಬೆಳ್ತಂಗಡಿ: ಅಜ್ಜನ ಕಣ್ಣೆದುರೇ ಮೊಮ್ಮಗನ ಅಪಹರಣ ನಡೆದಿರುವುದು ಜನ ದಂಗಾಗುವಂತೆ ಮಾಡಿತ್ತು.
ಈ ಘಟನೆ ಉಜಿರೆಯಲ್ಲಿ ನಡೆದಿತ್ತು ಸದ್ಯ ಬಾಲಕನ ಕಿಡ್ನಾಪ್ ಪ್ರಕರಣ ಸುಖಾಂತ್ಯ ಕಂಡಿದ್ದು, ಪೊಲೀಸರು ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಪಹರಣವಾದ 48 ಗಂಟೆಗಳಲ್ಲಿ ಪ್ರಕರಣವನ್ನು ಭೇದಿಸಿರುವ ಪೊಲೀಸ್ ಕೋಲಾರದಲ್ಲಿ ಮಗುವನ್ನು ಪತ್ತೆ ಹಚ್ಚಿ 6 ಜನ ಅಪಹರಣಕಾರರನ್ನು ಬಂಧಿಸಿದ್ದಾರೆ.
ಉಜಿರೆ ರಥಬೀದಿಯ ಬಿಜೋಯ್ ಅವರ ಮಗ ಅನುಭವ್ (8) ಮನೆಯಂಗಳದಲ್ಲಿ ಆಡುತ್ತಿದ್ದಾಗಲೇ ಎರಡು ದಿನಗಳ ಹಿಂದೆ ಮಗುವನ್ನು ಅಪಹರಿಸಿದ್ದರು.
ಉಭಯ ಜಿಲ್ಲೆಗಳಲ್ಲಿ ಈ ಪ್ರಕರಣ ಸಾಕಷ್ಟು ಆತಂಕ ಸೃಷ್ಟಿಸಿತ್ತು.
ಕೋಲಾರದ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ 5 ರ ಹೊತ್ತಿಗೆ ಪತ್ತೆ ಹಚ್ಚಿದರು.
ಕೂಡಲೇ ಅಪಹರಣಕಾರರನ್ನು ಕೋಲಾರ ಪೊಲೀಸ್ ಠಾಣೆಗೆ ಕರೆತರಲಾಯಿತು.
ಅಪರಾಹ್ನ 11 ರ ವೇಳೆಗೆ ಕೋಲಾರ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ, ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆತರಲಾಗುತ್ತದೆ ಎನ್ನಲಾಗಿದ್ದು, ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ಬಂದಕುಮಾರ್, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ನೇತೃತ್ವದ ವಿಶೇಷ ತಂಡ ಹಾಜರು ಪಡಿಸುವ ಸಾಧ್ಯತೆ ಇದೆ.
PublicNext
19/12/2020 08:00 am