ಬೆಂಗಳೂರು: 2008ರಲ್ಲಿ ಸಿಲಿಕಾನ್ ಸಿಟಿಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ಶಂಕಿತ ಆರೋಪಿ ಶೋಯಿಬ್ ನನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ದ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಬ್ಲಾಸ್ಟ್ ನಂತರ ಪ್ರತ್ಯೇಕ ದೂರು ದಾಖಲಿಸಿಕೊಂಡಿದ್ದ ಎಟಿಎಸ್ ನಿರಂತರವಾಗಿ ತೀವ್ರ ತನಿಖೆ ನಡೆಸುತ್ತಿದ್ದರು.
ಇದೀಗ 12 ವರ್ಷದ ಬಳಿಕ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿಂದೆ ಎಟಿಎಸ್ ಶೋಯಬ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಕೂಡ ಜಾರಿಗೊಳಿಸಿದ್ದರು.
2018ರಲ್ಲಿ ಸಲೀಂ ಎಂಬ ಮತ್ತೊಬ್ಬ ಆರೋಪಿಯನ್ನು ಎಟಿಎಸ್ ಅಧಿಕಾರಿಗಳು ಕೇರಳದಲ್ಲಿ ಬಂಧಿಸಿದ್ದರು.
2008ರ ಜುಲೈ 25ರಂದು ಮಡಿವಾಳ ಸೇರಿದಂತೆ ಬೆಂಗಳೂರಿನ ಒಟ್ಟು 9 ಕಡೆ ಬಾಂಬ್ ಸ್ಫೋಟಗಳು ನಡೆದಿದ್ದವು.
ಒಟ್ಟಾರೆ ಈ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು. 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಸದ್ಯ ಬಂಧಿತ ಆರೋಪಿಯಿಂದ ಸ್ಫೋಟದ ಬಗ್ಗೆ ಸತ್ಯಾ ಸತ್ಯೆತೆ ತಿಳಿಯಬೇಕಿದೆ.
PublicNext
22/09/2020 12:05 pm