ಬೆಂಗಳೂರು: ರಾಜ್ಯಾದ್ಯಂತ ಇರುವ ಎಂಬೆಸಿ ಗ್ರುಪ್ ಮಾಲೀಕರ ಮನೆ ಕಚೇರಿ ಸೇರಿದಂತೆ ಸುಮಾರು ೫೦ ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಬಾಕಿ, ಆದಾಯ ಮರೆಮಾಚಿರುವ ಆರೋಪದ ಮೇಲೆ ದಾಳಿ ನಡೆಸಲಾಗಿದೆ. ಈ ಮೂಲಕ ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಗ್ರೂಪ್‌ನ ಎಂ.ಡಿ ಜಿತು ವಿರ್ವಾನಿ, ನಿರ್ದೇಶಕ ನರಪತ್ ಸಿಂಗ್ ಚರೋರಿಯಾ ಮನೆಗಳು ಹಾಗೂ ಪ್ಲಾಟ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸ್ತಿದ್ದಾರೆ. 600ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ಮನೆ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರುವುದನ್ನು ಪತ್ತೆ ಮಾಡಿ ದಾಳಿ ಅಧಿಕಾರಿಗಳು ನಡೆಸಿದ್ದಾರೆ. ಗೋವಾ-ಕರ್ನಾಟಕ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿ ಲೆಕ್ಕಪತ್ರಗಳ ಶೋಧನೆ ನಡೆಸಲಾಗ್ತಿದೆ.
PublicNext
01/06/2022 11:39 am