ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಪವರ್ ಟಿ.ವಿ' ಸುದ್ದಿವಾಹಿನಿ MD ಮನೆ ಮೇಲೆ ಸಿಸಿಬಿ ದಾಳಿ

ಬೆಂಗಳೂರು: 'ಟೆಂಡರ್ ಕೊಡಿಸುವ ಆಮಿಷವೊಡ್ಡಿ ಹಣ ಸುಲಿಗೆ ಮಾಡಿ ವಂಚಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇಲೆ 'ಪವರ್ ಟಿ.ವಿ' ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ರಾಕೇಶ್ ಶೆಟ್ಟಿ ಹಾಗೂ ಇತರರ ವಿರುದ್ಧ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಎಫ್ ಐಆರ್ ದಾಖಲಾದ ಬೆನ್ನಲ್ಲೇ, ಸಿಸಿಬಿ ಪೊಲೀಸರು ರಾಕೇಶ್ ಮನೆ ಮೇಲೆ ಸೋಮವಾರ ದಿಢೀರ್ ದಾಳಿ ನಡೆಸಿದರು.

'ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿಯ ನಿರ್ದೇಶಕ ಚಂದ್ರಕಾಂತ್ ರಾಮಲಿಂಗಂ (36) ಅವರು ದೂರು ನೀಡಿದ್ದರು. ಕ್ರಿಮಿನಲ್ ಪಿತೂರಿ (ಐಪಿಸಿ 120ಬಿ), ಸುಲಿಗೆ (ಐಪಿಸಿ 384), ವಂಚನೆ (ಐಪಿಸಿ 419), ಸಹಿ ನಕಲು ಮಾಡಿದ (ಐಪಿಸಿ 465), ಜೀವ ಬೆದರಿಕೆ (ಐಪಿಸಿ 506) ಆರೋಪದಡಿ ರಾಕೇಶ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

'ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

Edited By : Nirmala Aralikatti
PublicNext

PublicNext

29/09/2020 02:50 pm

Cinque Terre

65.42 K

Cinque Terre

3

ಸಂಬಂಧಿತ ಸುದ್ದಿ