ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಜೊತೆ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ಮಾದಕ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪರಪ್ಪನ ಅಗ್ರಹಾರದಲ್ಲಿರುವ ಜೈಲು ಹಕ್ಕಿಗಳ ಸೆರೆಮನೆ ವಾಸ ಅ.23 ರವರೆಗೆ ವಿಸ್ತರಣೆ ಮಾಡಿ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಇಷ್ಟಕ್ಕೆ ಸುಮ್ಮನಾಗದ ಡ್ರಗ್ಗಿಣಿಯರ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಸಕಲ ಸಿದ್ಧತೆ ನಡೆಸಿದ್ದಾರೆ.
PublicNext
09/10/2020 03:26 pm