ತುಮಕೂರು: ಕಂಗನಾ ರೈತರನ್ನ ಭಯೋತ್ಪಾದಕರು ಎಂದು ಕರೆದಿದ್ದಾರೆಂದು ಆರೋಪಿಸಿ ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದರು.
ಈ ಹಿನ್ನೆಲೆ ಕಂಗನಾ ವಿರುದ್ಧ ಕೇಸ್ ದಾಖಲಿಸುವಂತೆ ಕಳೆದ ವಾರ ತುಮಕೂರಿನ ಜೆಎಮ್ಎಫ್ ಸಿ ಕೋರ್ಟ್ ನಿರ್ದೇಶನ ನೀಡಿತ್ತು.
ಕೋರ್ಟ್ ಆದೇಶದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 108, 153, 504 ಹಾಗೂ 44 ಅಡಿ ಎಫ್ ಐಆರ್ ದಾಖಲಾಗಿದೆ.
ಏನಿದು ಪ್ರಕರಣ?
ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಬಗ್ಗೆ ಟ್ವೀಟ್ ಮಾಡಿದ್ದ ಕಂಗನಾ ರಣಾವತ್, ಮಸೂದೆಯನ್ನ ವಿರೋಧಿಸುತ್ತಿರುವವರು ಟೆರರಿಸ್ಟ್ ಗಳು ಎಂದು ಹೇಳಿದ್ದರು.
ಸ್ವತಃ ರೈತರಾಗಿರುವ ವಕೀಲ ರಮೇಶ್ ನಾಯಕ್ ಕಂಗನಾ ಹೇಳಿಕೆಯಿಂದ ಅಸಮಾಧಾನಗೊಂಡು, ನೇರವಾಗಿ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು.
ಜೊತೆಗೆ ಡಿಜಿಪಿ ಮತ್ತು ಜಿಲ್ಲಾ ಪೊಲೀಸರಿಗೆ ಇ ಮೇಲ್ ಮೂಲಕ ಈ ಹಿಂದೆ ದೂರು ನೀಡಿದ್ದರು.
ಪೊಲೀಸರು ದೂರು ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ನೇರವಾಗಿ ತುಮಕೂರು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಪಿಸಿಆರ್ ದಾಖಲಾಗಿತ್ತು.
ಈ ಹಿನ್ನೆಲೆ ಎಫ್ ಐಆರ್ ದಾಖಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು.
PublicNext
13/10/2020 03:01 pm