ಬೆಂಗಳೂರು: ಡ್ರಗ್ಸ್ ಮಾಫಿಯಾದ ಪ್ರಮುಖ ಆರೋಪಿ ಆದಿತ್ಯ ಆಳ್ವಾ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಆದಿತ್ಯ ಆಳ್ವಾ ಸೋದರಿ ಪ್ರಿಯಾಂಕಾ ಆಳ್ವಾ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿ ಗೆ ಸಿಸಿಬಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಆರೋಪಿ ಆದಿತ್ಯ ಆಳ್ವಾ ಮಾಜಿ ಸಚಿವ ಜೀಬರಾಜ್ ಆಳ್ವಾ ಅವರ ಪುತ್ರನಾಗಿದ್ದಾನೆ ನಟ ವಿವೇಕ್ ಓಬೇರಾಯ್ ಅವರ ಬಾಮೈದ. ಬರೋಬ್ಬರಿ ಆರು ಎಕರೆ ವಿಸ್ತೀರ್ಣದಲ್ಲಿ ಆದಿತ್ಯ ಆಳ್ವಾ ಮನೆ ಇದೆ. ಇದೇ ಮನೆಯಲ್ಲಿ ವೀಕೆಂಡ್ ಪಾರ್ಟಿಗಳು ನಡೆಯುತ್ತಿರುವ ಬಗ್ಗೆ ಆರೋಪಿ ರವಿಶಂಕರ್ ತಪ್ಪೊಪ್ಪಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ಈಗಾಗಲೇ ಆದಿತ್ಯ ಆಳ್ವ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದ್ದು, ಪೊಲೀಸರು ಆದಿತ್ಯ ಆಳ್ವಗಾಗಿ ಶೋಧ ನಡೆಸುತ್ತಿದ್ದಾರೆ.
ಆದಿತ್ಯ ಆಳ್ವ ಮುಂಬೈನ ತನ್ನ ಸೋದರಿ ಪ್ರಿಯಾಂಕ ಆಳ್ವ ಒಬೆರಾಯ್ ಮನೆಯಲ್ಲಿ ಆಶ್ರಯ ಪಡೆದಿದ್ದಾನೆ ಎಂಬ ಅನುಮಾನದ ಮೇಲೆ ನಿನ್ನೆ ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು ವಿವೇಕ್ ಒಬೆರಾಯ್ ಮನೆ ಮೇಲೆ ಪೊಲೀಸರು ಮುಂಬೈಯಲ್ಲಿರುವ ನಟ ವಿವೇಕ್ ಒಬೆರಾಯ್ ಮನೆ ಸಿಸಿಬಿ ರೇಡ್ ಮಾಡಿದ್ದು, ಪ್ರಿಯಂಕ ಆಳ್ವ ಒಬೆರಾಯ್ ಗೆ ಸಿಸಿಬಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
PublicNext
16/10/2020 12:25 pm