ಬೆಂಗಳೂರು : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗರ್ಲಾನಿ ಜಾಮೀನಿನ ಅರ್ಜಿ ಕುರಿತು ಇಂದು ಹೈ ಕೋರ್ಟ್ ತೀರ್ಪು ಪ್ರಕಟಿಸಲಿದೆ.
ಕಳೆದೆರೆಡು ತಿಂಗಳಿನಿಂದ ಪರಪ್ಪನ ಅಗ್ರಹಾರದ ಅತಿಥಿಗಳಾಗಿರುವ ನಟಿಯರಿಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತು ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ಕೋರ್ಟ್, ಇಂದು ತೀರ್ಮಾನ ಪ್ರಕಟಿಸಲಿದೆ.
ಮಧ್ಯಾಹ್ನ 2.30ಕ್ಕೆ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠ ತೀರ್ಪು ನೀಡಲಿದ್ದು ನಟಿಯರಿಬ್ಬರಿಗೆ ಜಾಮೀನಾ, ಜೈಲಾ ಎಂಬುದು ನಿರ್ಧಾರವಾಗಲಿದೆ.
PublicNext
03/11/2020 07:46 am