ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡ್ರಗ್ಸ್ ಕೇಸ್ : ಜಾಮೀನಿಗಾಗಿ ಸುಪ್ರೀಂ ಮೊರೆ ಹೋದ ತುಪ್ಪದ ಹುಡುಗಿ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಹಕ್ಕಿಯಾಗಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜಾಮೀನಿಗಾಗಿ ಹರಸಾಹಸ ಪಡುತ್ತಿದ್ದಾರೆ.

ಆದರೆ ಪ್ರಯೋಜನವಾಗದ ಹಿನ್ನೆಲೆಯಲ್ಲಿ ನಟಿ ರಾಗಿಣಿ ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಕಂಬಿಗಳ ಹಿಂದಿದ್ದಾರೆ ಸೆಪ್ಟೆಂಬರ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟಿ ರಾಗಿಣಿಗೆ ನವೆಂಬರ್ 3ರಂದು ಹೈಕೋರ್ಟ್ ಜಾಮೀನು ನಿರಾಕರಿಸಿತ್ತು.

ಸದ್ಯ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು ಆ ಕುರಿತ ಅರ್ಜಿ ವಿಚಾರಣೆ ಡಿಸೆಂಬರ್ 4ರಂದು ನಡೆಯಲಿದೆ ಎನ್ನಲಾಗಿದೆ.

Edited By : Nirmala Aralikatti
PublicNext

PublicNext

28/11/2020 06:35 pm

Cinque Terre

111.13 K

Cinque Terre

5

ಸಂಬಂಧಿತ ಸುದ್ದಿ