ಬೆಂಗಳೂರು: ಸ್ಯಾಂಡಲ್'ವುಡ್ ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಮಾದಕ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಸೇರಿದಂತೆ ಬಂಧನಕ್ಕೊಳಗಾಗಿರುವ ಐವರು ಆರೋಪಿಗಳ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡಿದೆ.
ನಾಳೆಯಿಂದ ಜೈಲಿನಲ್ಲಿಯೇ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ಅಕ್ರಮ ಹಣ ವರ್ಗಾವಣೆ, ವಿಚಾರವಾಗಿ ಪಿಎಂಎಲ್ ಎ ಅಡಿ ಇಡಿ 5 ದಿನಗಳ ಕಾಲ ತನಿಖೆ ನಡೆಸಲು ಮುಂದಾಗಿದೆ.
ಇಡಿ ವಿಚಾರಣೆ ನಡೆಸಲಿರುವ ಹಿನ್ನೆಲೆಯಲ್ಲಿ ರವಿಶಂಕರ್, ವೀರೇನ್ ಖನ್ನಾ, ರಾಗಿಣಿ ದ್ವಿವೇದಿ, ರಾಹುಲ್ ಹಾಗೂ ಸಂಜನಾ ಗಲ್ರಾನಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.
PublicNext
25/09/2020 09:20 am