ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಶಾಂತ್ ಸಾವು ಪ್ರಕರಣ ಏಮ್ಸ್ ವರದಿ ಸಮರ್ಥಿಸಿಕೊಂಡ ಮುಂಬೈ ಪೊಲೀಸ

ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆಯಿಂದ ಮೃತಪಟ್ಟಿದ್ದಾರೆ ಮತ್ತು ಅದು ಕೊಲೆ ಅಲ್ಲ ಎಂದು ಏಮ್ಸ್ ವೈದ್ಯಕೀಯ ಮಂಡಳಿ ಶನಿವಾರ ಹೇಳಿಕೆ ನೀಡಿದ ಬೆನ್ನಲ್ಲೇ ಈ ವರದಿಯನ್ನು ಮುಂಬೈ ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

ನಟ ಸುಶಾಂತ್ ಪ್ರಕರಣದಲ್ಲಿ ನಮ್ಮ ತನಿಖೆ ಸಮರ್ಥವಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಏಮ್ಸ್ ಹೇಳಿಕೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಮುಂಬೈ ಪೊಲೀಸ್ ಆಯುಕ್ತ ಪರಮ್ ವೀರ್ ಸಿಂಗ್, 'ಪಟ್ಟಭದ್ರ ಹಿತಾಸಕ್ತಿಗಳು ತನಿಖೆಯ ಬಗ್ಗೆ ಏನೂ ತಿಳಿಯದೆ ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡರು' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

'ಮುಂಬೈ ಪೊಲೀಸರ ತನಿಖೆ ವೃತ್ತಿಪರವಾಗಿದೆ. ಶವಪರೀಕ್ಷೆ ನಡೆಸಿದ ಮುಂಬೈನ ಕೂಪರ್ ಆಸ್ಪತ್ರೆಯ ವೈದ್ಯರು ಸಹ ತಮ್ಮ ಕೆಲಸವನ್ನು ಸಮರ್ಪಕವಾಗಿ ಮಾಡಿದ್ದಾರೆ' ಎಂದು ಸಿಂಗ್ ತಿಳಿಸಿದ್ದಾರೆ.

ಜೂ.14ರಂದು ಮುಂಬೈನ ಬಾಂದ್ರಾದಲ್ಲಿ ಇರುವ ತಮ್ಮ ಅಪಾರ್ಟ್ಮೆಂಟ್ನಲ್ಲಿ ಸುಶಾಂತ್ ಸಿಂಗ್ ಮೃತದೇಹ ಪತ್ತೆಯಾಗಿತ್ತು.

ನಟಿ ರಿಯಾ ಚಕ್ರವರ್ತಿ ಹಾಗೂ ಆಕೆಯ ಕುಟುಂಬದ ವಿರುದ್ಧ ಸುಶಾಂತ್ ಸಿಂಗ್ ತಂದೆ ಕೆ.ಕೆ.ಸಿಂಗ್ ಅವರು ನೀಡಿದ್ದ ದೂರು ಆಧರಿಸಿ ಬಿಹಾರ ಪೊಲೀಸರು ತನಿಖೆ ನಡೆಸುತ್ತಿದ್ದರು.

ನಂತರದಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐ ಹಸ್ತಾಂತರಿಸಲಾಗಿದೆ.

Edited By : Nirmala Aralikatti
PublicNext

PublicNext

04/10/2020 09:51 am

Cinque Terre

128.75 K

Cinque Terre

2

ಸಂಬಂಧಿತ ಸುದ್ದಿ