ಬ್ಲೂ ಫಿಲ್ಮ್ ದಂಧೆ : ಜು.27ರ ವರೆಗೆ ಕುಂದ್ರಾ ಪೊಲೀಸ್ ಕಸ್ಟಡಿಗೆ

ಮುಂಬೈ : ನೀಲಿ ಚಿತ್ರ (Porn) ಗಳನ್ನು ಚಿತ್ರೀಕರಿಸಿ ಅದನ್ನು ಹಲವು ಆ್ಯಪ್ಗಳಿಗೆ ಅಪ್ಲೋಡ್ ಮಾಡುವ ದಂಧೆ ಮೂಲಕ ಹಣ ಗಳಿಸುತ್ತಿದ್ದ ಆರೋಪದ ಮೇಲೆ ಉದ್ಯಮಿ ರಾಜ್ಕುಂದ್ರಾ (Raj Kundra)ರನ್ನು ಮುಂಬೈ ಪೊಲೀಸರು ಬಂಧಿಸಿದ್ದರು.ಸದ್ಯ ಪೊಲೀಸ್ ಕಸ್ಟಡಿ ಅವಧಿಯನ್ನು ಮುಂಬೈ ಕೋರ್ಟ್ ಜುಲೈ 27ರ ವರೆಗೆ ವಿಸ್ತರಿಸಿದೆ.

ಕುಂದ್ರಾ ಅವರನ್ನು ಜುಲೈ 19 ರ ರಾತ್ರಿ ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದು, ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ.ಕುಂದ್ರಾ ಅವರ ಪೊಲೀಸ್ ಕಸ್ಟಡಿ ಅವದಿ ಶುಕ್ರವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮತ್ತೆ ತಮ್ಮ ವಶಕ್ಕೆ ಪಡೆದಿದ್ದಾರೆ.

ಕುಂದ್ರಾ ಅವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದು, ಅದರ ವಿಷಯಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆ ಮತ್ತು ಅವರ ವ್ಯವಹಾರ ಮತ್ತು ವಹಿವಾಟುಗಳನ್ನು ಸಹ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Public News

Public News

2 months ago

Cinque Terre

55.55 K

Cinque Terre

2

  • Rajesh
    Rajesh

    aa jarakiholi ne jarsi sikkbittu, eega aaramavagi erovaga..eden maha..

  • B.R.NAYAK
    B.R.NAYAK

    ರಾಜ್ ಕುಂದಾಪುರ