ಮುಂಬೈ: ನೀಲಿ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸದ್ಯ ಮುಂಬೈನ ಅಪರಾಧ ವಿಭಾಗದ ಪೊಲೀಸರು ಹೊಸದಾಗಿ ಎಫ್ ಐಆರ್ ದಾಖಲಿಸಿದ್ದು, ಉದ್ಯಮಿ ರಾಜ್ ಕುಂದ್ರಾ ಅವರ ಕಂಪನಿಯ ನಿರ್ಮಾಪಕರು ಮತ್ತು ನಟಿ ಗೆಹನಾ ವಸಿಷ್ಠ ಅವರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹಾಟ್ ಶಾಟ್ಸ್ ಆ್ಯಪ್ ಗಾಗಿ ಅಶ್ಲೀಲ ಚಿತ್ರಗಳನ್ನು ಶೂಟ್ ಮಾಡಲು ಒತ್ತಾಯಿಸುತ್ತಿದ್ದ ಆರೋಪದ ಮೇಲೆ ನಟಿ ಗೆಹನಾ ವಿರುದ್ಧ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಮೊಕದ್ದಮೆ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 420(ವಂಚನೆ) ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್ ಐಆರ್ ದಾಖಲಿಸಿದ್ದಾರೆ.
PublicNext
28/07/2021 02:46 pm