ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದ್ರಾ ಕಾಮಕ್ಕೆ ಅಂಜಿ ಟಾಯ್ಲೆಟ್ ನಲ್ಲಿ ಅಡಗಿ ಕುಳಿತಿದ್ದೆ: ನಟಿ ಶೆರ್ಲಿನ್ ಚೋಪ್ರಾ

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಗಂಡ ರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣದಲ್ಲಿಸೆರೆಮನೆವಾಸದಲ್ಲಿದ್ದಾರೆ.

ಸದ್ಯ ಈ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮತ್ತೋರ್ವ ನಟಿ ಗಂಭೀರ ಆರೋಪ ಮಾಡಿದ್ದು, ರಾಜ್ ಕುಂದ್ರಾ ತಮ್ಮ ಮೇಲೂ ಲೈಂಗಿಕ ಹಲ್ಲೆ ಮಾಡಿದ್ದರು ಎಂದು ಕಾಮಸೂತ್ರ 3ಡಿ ಸಿನಿಮಾ ಖ್ಯಾತಿಯ ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ.

ಮೂಲಗಳ ಪ್ರಕಾರ ಕಳೆದ ಏಪ್ರಿಲ್ ನಲ್ಲಿಯೇ ರಾಜ್ ಕುಂದ್ರಾ ವಿರುದ್ಧ ಶೆರ್ಲಿನ್ ಚೋಪ್ರಾ ದೂರು ನೀಡಿದ್ದರು.

'2019ರ ಆರಂಭದಲ್ಲಿಯೇ ಒಂದು ಆ್ಯಪ್ ಬ್ಯುಸಿನೆಸ್ ಗಾಗಿ ರಾಜ್ ಕುಂದ್ರಾ ಅವರು ನನ್ನನ್ನು ಕರೆದಿದ್ದರು. ಮೀಟಿಂಗ್ ಮುಗಿದ ಬಳಿಕ ಅವರು ನನ್ನ ಜೊತೆ ಅಸಭ್ಯವಾಗಿ ವರ್ತಿಸಲು ಶುರು ಮಾಡಿದರು. ಇದರಿಂದ ನಮ್ಮ ನಡುವೆ ಜಗಳ ಶುರುವಾಯಿತು. ನಾನು ಬೇಡ ಎಂದು ವಿರೋಧಿಸಿದರೂ ಕೂಡ ರಾಜ್ ಕುಂದ್ರಾ ಬಲವಂತವಾಗಿ ಕಿಸ್ ಮಾಡಲು ಬಂದರು. ನನಗೆ ಭಯವಾಯಿತು. ಇದನ್ನೆಲ್ಲ ನಿಲ್ಲಿಸುವಂತೆ ಕೇಳಿಕೊಂಡೆ. ನಂತರ ಅವರನ್ನು ತಳ್ಳಿ ಓಡಿ ಹೋದೆ. ಶೌಚಾಲಯಕ್ಕೆ ತೆರಳಿ ಅಡಗಿಕೊಂಡೆ ಎಂದು ದೂರಿನಲ್ಲಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ ಎನ್ನಲಾಗಿದೆ.

Edited By : Nirmala Aralikatti
PublicNext

PublicNext

29/07/2021 03:55 pm

Cinque Terre

62.91 K

Cinque Terre

4

ಸಂಬಂಧಿತ ಸುದ್ದಿ