ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಲವ್ ಯೂ ರಚ್ಚು' ಶೂಟಿಂಗ್ ಕೇಸ್ ; 3 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ 'ಲವ್ ಯೂ ರಚ್ಚು' ಚಿತ್ರದ ಶೂಟಿಂಗ್ ವೇಳೆ ರೋಪ್ ಎಳೆಯುವಾಗ ಫೈಟರ್ ವಿವೇಕ್ ಮೃತಪಟ್ಟಿದ್ದರು. ಸದ್ಯ ಈ ಕೇಸ್ ಗೆ ಸಂಬಂಧಿಸಿದಂತೆ ಸಿನಿಮಾ ನಿರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಕುಮಾರ್, ಕ್ರೇನ್ ಚಾಲಕ ಮಹದೇವ್ ಅವರನ್ನು ಬಂಧಿಸಲಾಗಿತ್ತು. ಈ ಮೂವರು ಆರೋಪಿಗಳಿಗೆ ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ಮತ್ತೆ 14 ದಿನ ನ್ಯಾಯಾಂಗ ಬಂಧನ ಆದೇಶವನ್ನು ಹೊರಡಿಸಿದೆ.

ಪ್ರಕರಣದಲ್ಲಿ ಚಿತ್ರತಂಡದ ನಿರ್ಲಕ್ಷ್ಯ ಎದ್ದು ಕಂಡಿದೆ. ಹೀಗಾಗಿ, ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಈ ಮೂವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನ ವಿಸ್ತರಿಸಲಾಗಿದೆ. ಸದ್ಯ ಈ ಮೂವರು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಬೇಕಾಗಿದೆ.

Edited By : Nirmala Aralikatti
PublicNext

PublicNext

24/08/2021 05:50 pm

Cinque Terre

68.87 K

Cinque Terre

1