ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದ ಆರೋಪದ ಮೇಲೆ ಅರೆಸ್ಟ್ ಆದ ಆರ್ಯನ್ ಖಾನ್ ಗೆ ಈವರೆಗೂ ಜಾಮೀನು ಸಿಕ್ಕಿಲ್ಲ. ಇಂದು ಮುಂಬೈನ ವಿಶೇಷ ಎನ್ಡಿಪಿಎಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ವಿಚಾರಣೆಯನ್ನು ಗುರುವಾರಕ್ಕೆ (ಅ.14) ಮುಂದೂಡಿದೆ. ಇದರಿಂದ ಖಾನ್ ಕುಟುಂಬಕ್ಕೆ ಮತ್ತೆ ನಿರಾಸೆಯಾಗಿದೆ.
‘ಇವರು ಡ್ರಗ್ಸ್ ಪೆಡ್ಲರ್ ಗಳು ಅಲ್ಲ. ಡ್ರಗ್ಸ್ ಕಳ್ಳ ಸಾಗಾಟವನ್ನು ಮಾಡಿಲ್ಲ. ಇವರೆಲ್ಲಾ ಚಿಕ್ಕ ಮಕ್ಕಳು. ಅವರು ಪಾಠವನ್ನು ಕಲಿತಿದ್ದಾರೆ. ಜೈಲಿನಲ್ಲಿ ದೀರ್ಘ ಅವಧಿಯವರೆಗೂ ಇರುವುದು ಬೇಡ. ಆರ್ಯನ್ ಖಾನ್ಗೆ ಜಾಮೀನು ನೀಡಿ’ ಎಂದು ಅಮಿತ್ ದೇಸಾಯಿ ಕೋರ್ಟ್ಗೆ ಮನವಿ ಮಾಡಿದರು.
ಎನ್ ಸಿಬಿ ಪರ ವಕೀಲರಾದ ಅನಿಲ್ ಸಿಂಗ್ ‘ಡ್ರಗ್ಸ್ ಕಳ್ಳ ಸಾಗಣೆ ಬಹಳ ಗಂಭೀರ, ಕಳಕಳಿಯ ವಿಷಯ. ರೇವ್ ಪಾರ್ಟಿಗಳಲ್ಲಿ ಯುವಜನತೆ ಡ್ರಗ್ಸ್ ಸೇವನೆ ಮಾಡುತ್ತಾರೆ. ಇದರಿಂದ ದೇಶಕ್ಕೆ ತೊಂದರೆ ಆಗುತ್ತದೆ. ಇದು ಒಂದಿಬ್ಬರ ಡ್ರಗ್ಸ್ ಸೇವನೆಗೆ ಸಂಬಂಧಪಟ್ಟಿದ್ದಲ್ಲ. ನಾವು ಇಡೀ ಜಾಲದ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಆರ್ಯನ್ ಖಾನ್ ನನ್ನು ಪಾರ್ಟಿಗೆ ಆಹ್ವಾನಿಸಲಾಗಿತ್ತು. ಯಾರು, ಯಾವಾಗ ಆಹ್ವಾನಿಸಿದರು ಎಂದು ಹೇಳುತ್ತಿಲ್ಲ. ಅವರಿಗೆ ಜಾಮೀನು ನೀಡಬಾರದು’ ಎಂದರು ಅನಿಲ್ ಸಿಂಗ್.
PublicNext
13/10/2021 05:40 pm