ಮುಂಬೈ : ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಇಂದು ಕೂಡಾ ಜಾಮೀನು ಸಿಕ್ಕಿಲ್ಲ.ಮುಂಬೈನ ಕಡಲ ತೀರ ಪ್ರದೇಶದ ಐಷಾರಾಮಿ ‘ಕ್ರೂಸ್’ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಹಾಗೂ ಇತರ ಏಳು ಜನರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್ ಸಿಬಿ) ಅಧಿಕಾರಿಗಳು ಬಂಧಿಸಿದ್ದರು.
ಮುಂಬೈನ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿದ ಕೋರ್ಟ್ ಜಾಮೀನು ನೀಡೋಕೆ ಸಾಧ್ಯವಿಲ್ಲ ಎಂದು ಹೇಳಿದೆ. ಆರ್ಯನ್ ಜತೆಗೆ ಇತರ ಆರೋಪಿಗಳ ಜಾಮೀನು ಕೂಡ ತಿರಸ್ಕರಿಸಲಾಗಿದೆ. ಹೀಗಾಗಿ, ಈಗ ಆರ್ಯನ್ ಪರ ವಕೀಲರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಇದರ ವಿಚಾರಣೆ ನಡೆದು, ತೀರ್ಪು ಬರುವವರೆಗೆ ಆರ್ಯನ್ ಗೆ ಜೈಲೇ ಗತಿ.
PublicNext
20/10/2021 02:50 pm