ಬೆಂಗಳೂರು: ಸಂಜೆ 6.30ರ ನಂತರ ವಿದ್ಯಾರ್ಥಿನಿಯರು ಹೊರಗೆ ಅಡ್ಡಾಡುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿತ್ತು. ಆದರೆ ಅದಕ್ಕೆ ವ್ಯಾಪಕವಾದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುತ್ತೋಲೆ ಹಿಂಪಡೆಯಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬಳಿಕ ಮೈಸೂರು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯರ ಚಲನವಲನ ಮೇಲೆ ನಿರ್ಬಂಧ ವಿಧಿಸಿತ್ತು.
ವಿವಿ ಕುಲಸಚಿವರು ಹೊರಡಿಸಿದ ಈ ಆದೇಶ ವಿವಾದಕ್ಕೆ ಕಾರಣವಾಗಿತ್ತು. ವಿಶ್ವವಿದ್ಯಾಲಯಗಳ ಕ್ಯಾಂಪಸ್ ಗಳು ವಿಶಾಲವಾಗಿರುತ್ತವೆ. ಎಂಬುದು ಸಾಮಾನ್ಯ ಸಂಗತಿಯಾದರೂ ವಿದ್ಯಾರ್ಥಿನಿಯರು, ಹೆಣ್ಣುಮಕ್ಕಳ ಓಡಾಟಕ್ಕೆ ನಿರ್ಬಂಧ ಹೇರುವುದು ಸರಿಯಾದ ನಿಯಮವಲ್ಲ ಎಂಬ ಅಭಿಪ್ರಾಯ ಕೇಳಿ ಬಂದಿತ್ತು. ಅದರ ಬದಲಿಗೆ ಕ್ಯಾಂಪಸ್ ನ್ನು ಸುರಕ್ಷಿತವಾಗಿಡಲು ಕ್ರಮ ಕೈಗೊಳ್ಳುವಂತೆ ಮೈಸೂರು ವಿವಿ ಕುಲಪತಿಗಳಿಗೆ ಸೂಚಿಸಿದ್ದೇನೆ ಎಂದು ಡಾ ಸಿ.ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
PublicNext
28/08/2021 04:34 pm